Wednesday 13 July 2016

400 ಮೆ.ವಾ. ಚಾವಣಿ ಸೌರವಿದ್ಯುತ್


ಬೆಂಗಳೂರು: ಚಾವಣಿ ಸೌರವಿದ್ಯುತ್‌ ಯೋಜನೆಯಡಿ 2018ರೊಳಗೆ 400 ಮೆಗಾವಾಟ್‌ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಲಿಖಿತ ಉತ್ತರ ನೀಡಿದ್ದಾರೆ.ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಚಿವಾಲಯದಿಂದ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಮೇಲೆ ಸೌರಶಕ್ತಿ ಚಾವಣಿ ಘಟಕಗಳನ್ನು
ಅಳವಡಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 13ನೇ ಹಣಕಾಸು ಆಯೋಗ ₹145.86 ಕೋಟಿ ನಿಗದಿ ಮಾಡಿದೆ ಎಂದು ವಿವರಿಸಿದ್ದಾರೆ


No comments:

Post a Comment